';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಡಿಕೇರಿ: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೋಲು ಕಂಡ ಹಿನ್ನಲೆಯಲ್ಲಿ ಮನನೊಂದ ಹಿರಿಯ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತಪಟ್ಟವರು.
ಭಾನುವಾರ ರಾತ್ರಿ ಟಿ.ವಿಯಲ್ಲಿ ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಿದಾಗ ಭಾರತ ಸೋತ ಹತ್ತು ನಿಮಿಷದಲ್ಲೇ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಉದಯ ಅವರನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟೊತ್ತಿಗಾಗಲೆ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದರು.
ಕ್ರೀಡಾಭಿಮಾನಿ ಹಾಗೂ ಕಾಫಿ ಬೆಳೆಗಾರರಾಗಿದ್ದ ಉದಯ ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.