dtvkannada

'; } else { echo "Sorry! You are Blocked from seeing the Ads"; } ?>

ಕೊಲ್ಕತ್ತಾ: ಜನರ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾದ ತಂಬಾಕು ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ ಮತ್ತು ಮಾರಾಟವನ್ನು ಮುಂದಿನ ಒಂದು ವರ್ಷದವರೆಗೆ ನಿಷೇಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಆಹಾರ ಸುರಕ್ಷತೆ ಆಯುಕ್ತರಾದ ತಪನ್ ಕೆ. ರುದ್ರ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದ್ದು, 2021ರ ನವೆಂಬರ್ 7ರವರೆಗೆ ಪಶ್ಚಿಮ ಬಂಗಾಳದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ಬ್ಯಾನ್ ಆಗಲಿದೆ.

ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಜನರ ಆರೋಗ್ಯಕ್ಕೆ ಅತ್ಯಂತ ಹಾನಿಕಾರಕವಾದ ತಂಬಾಕು ಅಥವಾ ನಿಕೋಟಿನ್ ಅನ್ನು ಪದಾರ್ಥಗಳಾಗಿ ಬಳಸುವ ಆಹಾರದ ಉತ್ಪನ್ನಗಳ ಮಾರಾಟವನ್ನು ಪಶ್ಚಿಮ ಬಂಗಾಳದಲ್ಲಿ ನಿಷೇಧಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಆಹಾರ ಸುರಕ್ಷತೆ ಆಯುಕ್ತರಾದ ತಪನ್ ಕೆ. ರುದ್ರ ಆದೇಶ ಹೊರಡಿಸಿದ್ದಾರೆ. ಗುಟ್ಖಾ ಮತ್ತು ಪಾನ್ ಮಸಾಲಾಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅನ್ನು ಪದಾರ್ಥಗಳಾಗಿ ಬಳಸಲಾಗುತ್ತದೆ. ಹೀಗಾಗಿ ಅದರ ತಯಾರಿಕೆ ಮತ್ತು ಮಾರಾಟಕ್ಕೆ ನಿಷೇಧ ವಿಧಿಸಲಾಗಿದೆ.

ಸಾಮಾನ್ಯವಾಗಿ ಮದ್ಯ, ಗುಟ್ಕಾ, ಪಾನ್ ಮಸಾಲದಂತಹ ವಸ್ತುಗಳ ಮಾರಾಟದಿಂದ ರಾಜ್ಯ ಸರ್ಕಾರಗಳಿಗೆ ಸಾಕಷ್ಟು ತೆರಿಗೆ ಬರುತ್ತದೆ. ಆದರೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ದೇಶಾದ್ಯಂತ ಹಲವು ರಾಜ್ಯಗಳು ಕ್ರಮೇಣ ನಿಕೋಟಿನ್ ಹೊಂದಿರುವ ಗುಟ್ಖಾ ಮತ್ತು ಇತರ ಉತ್ಪನ್ನಗಳನ್ನು ನಿಷೇಧಿಸಲು ಕ್ರಮಗಳನ್ನು ಕೈಗೊಂಡಿವೆ. ಅವುಗಳ ಸಾಲಿಗೆ ಪಶ್ಚಿಮ ಬಂಗಾಳವೂ ಸೇರ್ಪಡೆಯಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!