ಉಳ್ಳಾಲ: ತೊಕ್ಕೊಟ್ಟು ಫ್ಲೈ ಓವರ್’ನಲ್ಲಿ ಅಪಘಾತ ಸಂಭವಿಸಿ ಬೈಕ್ ಸವಾರ ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ದಾರುಣ ಮೃತಪಟ್ಟ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ.ಮೃತ ವ್ಯಕ್ತಿಯನ್ನು ಕುಂಪಲ ನಿವಾಸಿ ಸುಬ್ರಹ್ಮಣ್ಯ ಸಿಂದಿಯಾ (50) ಎಂದು ಗುರುತಿಸಲಾಗಿದೆ.
ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಫ್ಲೈಓವರ್ ಗೆ ಢಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಸುಮಾರು 20 ಅಡಿ ಆಳದ ಸರ್ವೀಸ್ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.ತಲೆಗೆ ಗಂಭೀರ ಗಾಯಗೊಂಡ ಸುಬ್ರಮಣ್ಯ ರವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತರು ತಾಯಿ, ಪತ್ನಿ, ಮಗಳು ಹಾಗೂ ಅಪಾರ ಬಂದುಗಳನ್ನು ಅಗಲಿದ್ದಾರೆ ಎಂದು ತಿಳಿದು ಬಂದಿದೆ