';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಜಯಪುರ: ಕಾಂಗ್ರೆಸ್ ಸರ್ಕಾರ ಈ ದೇಶಕ್ಕೆ ಭಯೋತ್ಪಾದನೆ, ಬಡತನ, ಭ್ರಷ್ಟಾಚಾರ, ನಿರುದ್ಯೋಗವನ್ನು ಕೊಡುಗೆಯಾಗಿ ನೀಡಿದೆ. ಸುದೀರ್ಘ ಆಡಳಿತ ನಡೆಸಿದ್ರೂ ಅವರ ಬಳಿ ಸಾಧನೆ ಇಲ್ಲ. ಕಾಂಗ್ರೆಸ್ ಸೋಲಿನ ಭೀತಿಯಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ ಎಂದು ಸಿಂದಗಿ ಪಟ್ಟಣದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ವಾಗ್ದಾಳಿ ನಡೆಸಿದ್ದಾರೆ.
ದೇಶ ಒಡೆಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಲಿಂಗಾಯತ ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಟೀಕಿಸಿದ್ದಾರೆ.ಕುರಿ ಕಾಯುವವರ ಬಗ್ಗೆ ನಮಗೆ ಚಿಂತನೆ ಇದೆ. ಬಾದಾಮಿಯಲ್ಲಿ ನೀವು ಹಣದಿಂದ ಗೆದ್ದಿದ್ದಾ ಎಂದು ಸಿದ್ದರಾಮಯ್ಯಗೆ ನಳಿನ್ ಕುಮಾರ್ ಕಟೀಲು ಪ್ರಶ್ನೆ ಮಾಡಿದ್ದಾರೆ. ಇವತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಮ್ಮದೆ ಇದೆ. ಮುಂದಿನ ದಿನಗಳಲ್ಲಿ ಸಿಂದಗಿ ಅಭಿವೃದ್ಧಿಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಂದಗಿ ಪಟ್ಟಣದಲ್ಲಿ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.