ಬೆಂಗಳೂರು: ಖ್ಯಾತ ಚಲನ ಚಿತ್ರ ನಟ ಹಾಗೂ ಡಾ/ರಾಜ್‌ಕುಮಾರ್ ಅವರ ಪುತ್ರ ಪುನೀತ್ ರಾಜ್‌ಕುಮಾರ್ ಅವರು ಜಿಮ್ ಮಾಡುತ್ತಿದ್ದ ವೇಳೆಯಲ್ಲಿ ಹೃದಯಘಾತ ಸಂಭವಿಸಿದೆ.
ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದಾರೆ. ಪುನೀತ್ ರಾಜ್‌ಕುಮಾರ್ ಅಸ್ವಸ್ಥರಾಗಿರುವ ವಿಷಯ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು ಆಸ್ಪತ್ರೆಗೆ ಭೇಟಿನೀಡುತ್ತಿದ್ದಾರೆ.
ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್‌ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕುಟುಂಬದವರು ಅಧಿಕೃತವಾಗಿ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಸದ್ಯ ಪುನೀತ್ ರಾಜ್‌ಕುಮಾರ್ ಅವರಿಗೆ ಇಸಿಜಿ ಮಾಡಲಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಪುನೀತ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದ ಮೇಲೆ ಒಂದು ಕ್ಷಣ ಆತಂಕ ಮೂಡಿರುವುದು ನಿಜ. ಆದರೆ ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಸೋಶಿಯಲ್ ಮೀಡಿಯಾ ಮೂಲಕ ಪ್ರಾರ್ಥಿಸುತ್ತಿದ್ದಾರೆ. ನಮ್ಮ ಪ್ರಾರ್ಥನೆಯೂ ಅದೇ .