ಬೆಂಗಳೂರು: ಸ್ಯಾಂಡಲ್’ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶುಕ್ರವಾರ ಬೆಳಗ್ಗೆ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಲೆದಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಚಿಕ್ಕ ವಯಸ್ಸಿನಿಂದಲೂ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ಪುನೀತ್ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಅವರನ್ನು ಹೆಚ್ಚು ಇಷ್ಟಪಡುತ್ತಾರೆ. ಮಕ್ಕಳಿಗೂ ಅಪ್ಪು ಎಂದರೆ ಅಚ್ಚುಮೆಚ್ಚು. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಸೋಶಿಯಲ್ ಮೀಡಿಯಾ ಮೂಲಕ ಪ್ರಾರ್ಥಿಸಿದ್ದರು. ಆದರೆ, ಈ ಪ್ರಾರ್ಥನೆ ಕೊನೆಗೂ ಇಡೇರಲೇ ಇಲ್ಲ.