';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಹನೂರು: ಕನ್ನಡ ಚಿತ್ರ ರಂಗದ ಮೇರು ನಟ ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ತಿಳಿಯುತ್ತಲೇ ಅಪ್ಪಟ ಅಭಿಮಾನಿಯೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಮರೂರು ಎಂಬಲ್ಲಿ ನಡೆದಿದೆ.
ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯ ವಿಷಯ ಕೇಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮುನಿಯಪ್ಪ ಎಂಬವನೇ ಮೃತಪಟ್ಟ ಯುವಕನಾಗಿದ್ದು, ಚಿಕ್ಕವರಿದ್ದಾಗಿನಿಂದಲೂ ಮುನಿಯಪ್ಪ, ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ಪುನೀತ್ ಅವರ ಎಲ್ಲ ಸಿನೆಮಾಗಳನ್ನು ತಪ್ಪದೇ ನೋಡುತ್ತಿದ್ದವನು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಕುಸಿದು ಬಿದ್ದ ತಕ್ಷಣ ಕುಟುಂಬಸ್ಥರು ಪ್ರಥಮ ಚಿಕಿತ್ಸೆ ಕೊಟ್ಟಿದ್ದರೂ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆಂದು ತಿಳಿದು ಬಂದಿದೆ.