ಬೆಳ್ತಂಗಡಿ, ಅ.29: ತ್ರಿಪುರಾದಲ್ಲಿ ಮುಸ್ಲಿಮರ ಮೇಲಿನ ಸರಕಾರಿ ಪ್ರೇರಿತ ಮತ್ತು ಸಂಘಪರಿವಾರದ ಗೂಂಡಗಳಿಂದ ನಡೆಯುವ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಮತ್ತು ನಾವೂರ ಡಿವಿಝನ್ ವತಿಯಿಂದ ಮಿನಿ ವಿಧಾನಸಭಾ ಬಳಿ ಪ್ರತಿಭಟನೆ ಮಾಡಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹೀರ್ ಇಂಜಿನಿಯರ್ ದಿಕ್ಸೂಚಿ ಭಾಷಣವನ್ನು ಮಾಡಿದರು. ಈ ಸಮಯದಲ್ಲಿ ತ್ರಿಪುರ ಸರ್ಕಾರ ಮತ್ತು ಸಂಘಪರಿವಾರದ ವಿರುದ್ದ ಗಟ್ಟಿ ಧ್ವನಿಯಲ್ಲಿ ಘೋಷಣೆ ಕೂಗಲಾಯಿತು.
ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಜಿರೆ ಡಿವಿಝನ್ ಅಧ್ಯಕ್ಷರಾದ ಮಮ್ಮಾದ್ ಆಲಿ ನಾವೂರ, ಡಿವಿಝನ್ ಅಧ್ಯಕ್ಷ ರದ ರಸೀದ್ ಬೆಳ್ತಂಗಡಿ, ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಫಝಲ್ ರೆಹಮನ್ ಮತ್ತು ಅನೇಕ ಕಾರ್ಯಕರ್ತರು, ಊರಿನ ನಾಗರಿಕರು ಉಪಸ್ಥಿತರಿದ್ದರು.