ವಿಟ್ಲ: ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ರೋದನೆ ಮುಗಿಲುಮುಟ್ಟಿದೆ.ಮೃತ ಯುವತಿಯನ್ನು ಶ್ರಾವ್ಯ (20) ಎಂದು ಗುರುತಿಸಲಾಗಿದೆ.
ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ರಾವ್ಯ ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಳು.ಅ.29 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈಕೆ ತನ್ನ ಕೋಣೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.ಘಟನೆ ಬಗ್ಗೆ ಪೋಲಿಸರು ದೂರು ದಾಖಲಿಸಿಕೊಂದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.