ಪುತ್ತೂರು, ಅ,31: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬಳಿಗೆ ಕಾರು ಡಿಕ್ಕಿಯಾಗಿ ಪಾದಚಾರಿ ಯುವತಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ.
ಅಪಘಾತಕ್ಕೆ ಒಳಗಾದ ಯುವತಿಯು ಮನೆಯ ಸಮೀಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ತೆರಲುತ್ತಿದ್ದ ವೇಳೆ ಹಠಾತ್ತಾಗಿ ಬಂದ ಮಾರುತಿ 800 ಕಾರು ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಗಾಜು ನುಚ್ಚುನೂರಾಗಿದೆ. ಗಾಯಗೊಂಡ ಯುವತಿಯನ್ನು ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.