';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ದುಬೈ: ವಿಶ್ವಕಪ್ ಸೂಪರ್-12 ಹಂತದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಎಂಟು ವಿಕೆಟ್ ಅಂತರದ ಹೀನಾಯ ಸೋಲಿಗೆ ಶರಣಾಗಿದೆ.
ಇದರೊಂದಿಗೆ ಸತತ ಎರಡನೇ ಸೋಲಿನ ಮುಖಭಂಗಕ್ಕೊಳಗಾಗಿರುವ ಟೀಮ್ ಇಂಡಿಯಾ, ಸೆಮಿಫೈನಲ್ ಕನಸು ಬಹುತೇಕ ಅಸ್ತಮಿಸಿದೆ. ಈ ಮೊದಲು ಪಾಕಿಸ್ತಾನ ವಿರುದ್ಧ ನಡೆದ ಮೊದಲ ಪಂದ್ಯದಲ್ಲೂ ಹೀನಾಯ ಸೋಲಿಗೆ ಶರಣಾಗಿತ್ತು.
ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಬೌಲಿಂಗ್ ಆಯ್ದುಕೊಂಡರು. ಆದರೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 11 ಆಗಿದ್ದ ವೇಳೆ ಆರಂಭಿಕ ಇಶಾನ್ ಕಿಶನ್ ಔಟಾದರೆ, 18 ರನ್ ಗಳಿಸಿ ಕೆಎಲ್ ರಾಹುಲ್ ಕೂಡ ವಿಕೆಟ್ ಒಪ್ಪಿಸಿದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೋಹಿತ್ ಶರ್ಮಾ 14 ರನ್ ಬಾರಿಸಿ ಹೊರನಡೆದರೆ, ನಾಯಕ ವಿರಾಟ್ ಕೊಹ್ಲಿ 9 ರನ್’ಗಳಿಗೆ ನಿರ್ಗಮಿಸಿದರು.
ಭಾರತ ಒಡ್ಡಿದ 111 ರನ್ ಗೆಲುವಿನ ಗುರಿಯನ್ನು 14.3 ಓವರ್‌ಗಳಲ್ಲಿ ಕೇವಲ ಎರಡು ವಿಕೆಟ್ ನಷ್ಟಕ್ಕೆ ತಲುಪಿದ ನ್ಯೂಜಿಲೆಂಡ್ ಜಯಭೇರಿ ಮೊಳಗಿಸಿತು.