';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಧಾರವಾಡ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾಗಿ ಸಚಿವ ಸಂಪುಟ ಸೇರಲು ಕಸರತ್ತು ನಡೆಸಿರುವ ಬಗ್ಗೆ ವರದಿಯಾಗಿದೆ.
ಧಾರವಾಡ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಕಣ್ಣು ತಪ್ಪಿಸಿ ಭೇಟಿ ಮಾಡಿರುವ ರಮೇಶ್ ಜಾರಕಿಹೊಳಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆದಿರುವ ಸಾಧ್ಯತೆ ಇದೆ. ಸಿಡಿ ಪ್ರಕರಣದ ನಂತರ ಸಂಪುಟ ಸೇರಲು ಕಸರತ್ತು ನಡೆಸುತ್ತಿರುವ ಜಾರಕಿಹೊಳಿ, ಧಾರವಾಡದಲ್ಲಿ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಬೊಮ್ಮಾಯಿ ತಮ್ಮ ಪುತ್ರನ ಕಾರ್ಖಾನೆಯಲ್ಲಿ ಪೂಜೆಗೆ ಬಂದಿದ್ದರು. ಕುಟುಂಬ ಸದಸ್ಯರಷ್ಟೇ ಸೇರಿ ಈ ಪೂಜೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಕಾರ್ಖಾನೆಗೆ ಬಂದು ರಮೇಶ್ ಜಾರಕಿಹೋಳಿ ಭೇಟಿ ಮಾಡಿ ತೆರಳಿದ್ದಾರೆ.