';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕಾರು-ಬೈಕ್ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಿನ್ನೆ ಸಂಜೆ ನಡೆದಿದೆ.
ಮೃತರನ್ನು ನಗರದ ಕದ್ರಿ ನಿವಾಸಿ ಸಂದೇಶ್ (27)ಎಂದು ಗುರುತಿಸಲಾಗಿದೆ.
ಸಂದೇಶ್ ತನ್ನ ಬೈಕ್‌ನಲ್ಲಿ ಬಜ್ಪೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಕರಂಬಾರು ಮಸೀದಿಯ ಬಳಿ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡದಿದೆ ಎನ್ನಲಾಗಿದೆ.
ಇದರಿಂದ ರಸ್ತೆಗೆಸೆಯಲ್ಪಟ್ಟ ಸಂದೇಶ್‌ರ ಮೇಲೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ಲಾರಿ ಹರಿದಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಸಂದೇಶ್ ಖಾಸಗಿ ಸಂಸ್ಥೆಯೊಂದರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.