ಮಂಗಳೂರು: ಕಾರು ಪಲ್ಟಿಯಾಗಿ ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಗರ ಹೊರವಲಯದ ಗುರುಪುರ ಕೈಕಂಬದ ವಿಕಾಸ್‌ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ನಿನ್ನೆ ಮಧ್ಯರಾತ್ರಿ 2.30 ಸುಮಾರಿಗೆ ಮೂಡಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ರಿಟ್ಝ್ ಕಾರು ವಿಕಾಸ್ ನಗರ ಬಳಿ ತಲುಪಿದಾಗ ರಸ್ತೆ ಮಧ್ಯೆ ಮಳೆ ನೀರು ನಿಂತಿದ್ದು, ಅದನ್ನು ತಪ್ಪಿಸಲು ಹೋಗಿ ಮಗುಚಿ ಬಿದ್ದಿದೆ.ಈ ವೇಳೆ ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪಾರಾಗಿದ್ದು, ಸ್ಥಳೀಯರು ರಕ್ಷಿಸಿದ್ದಾರೆ. ಘಟನಾ ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.