ನವದೆಹಲಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಭಾರತ ಟಿ–20ತಂಡದ ನಾಯಕನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದ್ದು, ಜೈಪುರದಲ್ಲಿ ನವೆಂಬರ್ 17ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.
16 ಸದಸ್ಯರ ಭಾರತ ತಂಡದಲ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಋತುರಾಜ್ ಗಾಯಕ್ವಾಡ್, ಹೆಚ್ಚು ವಿಕೆಟ್ ಪಡೆದಿದ್ದ ಹರ್ಷಲ್ ಪಟೇಲ್ ಮತ್ತು ಆಲ್‌ರೌಂಡರ್ ಸಾಮರ್ಥ್ಯ ಪ್ರದರ್ಶಿಸಿದ್ದ ವೆಂಕಟೇಶ್ ಅಯ್ಯರ್ ಅವರಿಗೆ ಸ್ಥಾನ ನೀಡಲಾಗಿದೆ.
ಕೊಹ್ಲಿ, ಶಮಿ, ಬುಮ್ರಾ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಟಿ–20 ವಿಶ್ವಕಪ್ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಹಾರ್ದಿಕ್ ಪಾಂಡ್ಯಾ ಅವರನ್ನು ತಂಡದಿಂದ ಹೊರಗಿಡಲಾಗಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ–20 ಸರಣಿಗೆ ಆಯ್ಕೆಯಾಗಿರುವ ಭಾರತ ತಂಡ ಇಂತಿದೆ:
ರೋಹಿತ್ ಶರ್ಮಾ(ನಾಯಕ), ಕೆ.ಎಲ್. ರಾಹುಲ್(ಉಪನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ರವಿಂಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್
ನ್ಯೂಜಿಲೆಂಡ್ ವಿರುದ್ದದ ಮೊದಲ ಟಿ20 ಪಂದ್ಯವು ನವೆಂಬರ್ 17 ರಂದು ಜೈಪುರದಲ್ಲಿ ನಡೆಯಲಿದ್ದು, 2ನೇ ಪಂದ್ಯವು ರಾಂಚಿಯಲ್ಲಿ ನವೆಂಬರ್ 19 ರಂದು ನಡೆಯಲಿದೆ. ಇನ್ನು 3ನೇ ಟಿ20 ಪಂದ್ಯವು ಕೊಲ್ಕತ್ತಾದಲ್ಲಿ ನವೆಂಬರ್ 21 ರಂದು ಜರುಗಲಿದೆ. ಈ ಸರಣಿಯೊಂದಿಗೆ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>