ಉಪ್ಪಿನಂಗಡಿ: ಟ್ಯಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೇಗೇಟು ಎಂಬಲ್ಲಿ ಇಂದು ನಡೆದಿದೆ.
ಪೆರಿಯಡ್ಕದಿಂದ ಬರುತ್ತಿದ್ದ ಟ್ಯಾಕ್ಟರ್, ಬೈಕ್ ಗೆ ಢಿಕ್ಕಿ ಹೊಡೆದಿದ್ದು ಬೈಕ್ ಸವಾರ ಕಾಣಿಯೂರು ಬೆಂಗಾಯ ನಿವಾಸಿ ಭುವನೇಶ್ ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು.