';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಟ್ಲ: ಮಾಣಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು ಇದೇ ವೇಳೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದು ಘಟನೆಯೂ ಕೋಮುದ್ವೇಷಕ್ಕೆ ತಿರುಗಿದೆ.
ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಎಂಬಲ್ಲಿ ಈ ಘಟನೆ ನಡೆದಿದ್ದು ಕಲ್ಲಡ್ಕದಿಂದ ಮಾಣಿಯತ್ತ ಸಂಚರಿಸುತ್ತಿದ್ದ ಇನೋವಾ ಕಾರು ಮತ್ತು ಅದರ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಶಿಫ್ಟ್ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಘಟನೆಗೆ ಸಂಬಂಧಿಸಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಮಾತಿಗೆ-ಮಾತು ಬೆಳೆದು ಇತ್ತಂಡಗಳು ಹಲ್ಲೆ ಮಾಡಿಕೊಂಡಿದ್ದಾರೆ.ವಿಭಿನ್ನ ಕೋಮುಗಳ ತಂಡಗಳ ನಡುವೆ ಗಲಾಟೆ ತಾರಕ್ಕೇರುತ್ತಿರುವಾಗ ಎರಡು ತಂಡಗಳ ಜನರು ಜಮಾಯಿಸಿದರು.
ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸಿದ್ದಾರೆ.ಮತ್ತು ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.