';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಕ್ಯಾಟರಿಂಗ್ ಸಾಗಾಟ ಮಾಡಿ ಬರುತ್ತಿದ್ದ ಪಿಕ್ ಅಪ್ ವಾಹನವೊಂದು ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ರಾಮಲಕಟ್ಟೆಯ ಬಳಿ ಇಂದು ನಡೆದಿದೆ.
ಮೃತಪಟ್ಟವರನ್ನು ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಹಾಗೂ ಆಶಿತ್ (21) ಎಂದು ಗುರುತಿಸಲಾಗಿದೆ. ಸಿಂಚನ್ ಹಾಗೂ ಸುದೀಪ್ ಗಾಯಗೊಂಡಿದ್ದಾರೆ.
ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಯಿಂದ ಬರುತ್ತಿದ್ದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ಕೊಂಡೊಯ್ಯಲಾದರೂ ಅವರಿಬ್ಬರೂ ಅದಾಗಲೇ ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಪಿಕ್ ಅಪ್ ಹಿಂಬದಿಯಲ್ಲಿ ಇದ್ದರು. ಬಂಟ್ವಾಳ ಸಂಚಾರ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.