ಮಂಗಳೂರು: ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ನಗರ ಹೊರವಲಯದ ಸುರತ್ಕಲ್‌ನಲ್ಲಿ ನಡೆದಿದೆ.
ಘಟನೆ ಸಂಬಂಧ 6 ಜನರನ್ನು ವಶಕ್ಕೆ ಪಡೆಯಲಾಗಿದೆ.ಹಲ್ಲೆಗೊಳಗಾದ ಯುವಕನನ್ನು ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಯಾಸೀನ್ ಎಂದು ಗುರುತಿಸಲಾಗಿದೆ. ವಶಕ್ಕೆ ಪಡೆದವರನ್ನು ಪ್ರಹ್ಲಾದ್, ಪ್ರಶಾಂತ್, ಗುರುಪ್ರಸಾದ್, ಪ್ರತೀಶ್, ಭರತ್, ಸುಖೇಶ್ ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಕಾಲೇಜೊಂದರ ವಿದ್ಯಾರ್ಥಿಯೊಬ್ಬರು ಅನ್ಯ ಧರ್ಮದ ಸಹಪಾಠಿಯನ್ನು ಕುಳ್ಳಿರಿಸಿಕೊಂಡು ಸುರತ್ಕಲ್‌ನ ಅಪಾರ್ಟ್ಮೆಂಟ್ ಬರುತ್ತಿದ್ದರು.ಈ ವೇಳೆ 5-6 ಜನ ಯುವಕರು ಬೈಕ್‌ನಲ್ಲಿ ಬಂದು ಅಡ್ಡಗಟ್ಟಿ ಇಬ್ಬರ ಹೆಸರು ಕೇಳಿ, ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದಾರೆ.ಜೊತೆಗೆ ಯುವತಿಗೆ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ 6 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ಇಬ್ಬರು ವಿದ್ಯಾರ್ಥಿಗಳು ಒಂದೇ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಯುವತಿ ತನ್ನ ಅಪಾರ್ಟ್ಮೆಂಟ್ ಖಾಲಿ ಮಾಡುವ ಸಲುವಾಗಿ ಯಾಸೀನ್’ ಸಹಾಯ ಕೋರಿದ್ದಳು. ಅದರಂತೆ ಆಕೆಗೆ ಸಹಾಯ ಮಾಡಳು ಯಾಸೀನ್ ತೆರಳಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಭಜರಂಗದಳ ಕಾರ್ಯಕರ್ತರು ಯುವಕ-ಯುವತಿಯನ್ನು ಹಿಂಬಾಲಿಸಿ ಹಲ್ಲೆ ನಡೆಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ.