ಮೆಲ್ಕಾರ್: ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೆಲ್ಕಾರ್ ಜಂಕ್ಷನ್’ನಲ್ಲಿ ತಡರಾತ್ರಿ ನಡೆದಿದೆ. ಗಾಯಗೊಂಡ ವ್ಯಕ್ತಿ ಗಣೇಶ್ ಎಂದು ತಿಳಿದು ಬಂದಿದೆ.
ಮಾಣಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ಮತ್ತು ಮೆಲ್ಕಾರ್’ನಿಂದ ಸಜಿಪ ಕಡೆ ಹೋಗುತ್ತಿದ್ದ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಬಿಸಿರೋಡ್’ ಕಡೆಯಿಂದ ಬಂದ ಬೈಕ್ ಸವಾರ ಸಜಿಪ ಹೋಗುವ ರಸ್ತೆಗೆ (ಬಲಕ್ಕೆ) ತಿರುಗಿದ್ದು, ಬೈಕ್’ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪೇಟೆಯಲ್ಲಿರುವ ವೃತ್ತಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ವೃತ್ತವು ಸಂಪೂರ್ಣ ಒಡೆದು ಹೋಗಿದೆ.ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.