dtvkannada

ಜೈಪುರ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತದ 5 ವಿಕೆಟ್ ಅಂತರದ ರೋಚಕ ಜಯ ಗಳಿಸಿದೆ.

ಜೈಪುರದ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಮಾಡಿದ ನ್ಯೂಜಿಲೆಂಡ್ ತಂಡವು, ಮಾರ್ಟಿನ್ ಗಪ್ಟಿಲ್ (70) ಹಾಗೂ ಮಾರ್ಕ್ ಚಾಪ್‌ಮನ್ (63) ಆಕರ್ಷಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 164 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು. 

ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ ರೋಹಿತ್ ಶರ್ಮಾ(48) ಹಾಗೂ ಸೂರ್ಯಕುಮಾರ್ ಯಾದವ್ (62) ಬಿರುಸಿನ ಅರ್ಧಶತಕದ ನೆರವಿನಿಂದ ಜಯಗಳಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ ತಂಡ ಇನ್ನಿಂಗ್ಸ್‌ನ ಪ್ರಥಮ ಓವರ್‌ನಲ್ಲೇ ಡೆರಿಲ್ ಮಿಚೆಲ್ (0) ಅವರನ್ನು ಬಲಗೈ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಹೊರದಬ್ಬಿದರು.

ಈ ಹಂತದಲ್ಲಿ ಜೊತೆಗೂಡಿದ ಗಪ್ಟಿಲ್ ಹಾಗೂ ಚಾಪ್‌ಮನ್ ದ್ವಿತೀಯ ವಿಕೆಟ್‌ಗೆ ಶತಕದ (109) ಜೊತೆಯಾಟ ಕಟ್ಟಿದರು. ಈ ಮೂಲಕ ಸವಾಲಿನ ಮೊತ್ತ ಪೇರಿಸಲು ನೆರವಾದರು. 

42 ಎಸೆತಗಳನ್ನು ಎದುರಿಸಿದ ಗಪ್ಟಿಲ್ ನಾಲ್ಕು ಸಿಕ್ಸರ್ ಹಾಗೂ ಮೂರು ಬೌಂಡರಿ ನೆರವಿನಿಂದ 70 ರನ್ ಗಳಿಸಿದರು. ಅವರಿಗೆ ಸಾಥ್ ನೀಡಿದ ಚಾಪ್‌ಮನ್ 50 ಎಸೆತಗಳಲ್ಲಿ ಆರು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 63 ರನ್ ಗಳಿಸಿದರು. 

ಇನ್ನುಳಿದಂದೆ ಟಿಮ್ ಸೀಫರ್ಟ್ (12), ಗ್ಲೆನ್ ಫಿಲಿಪ್ಸ್ (0), ರಚಿನ್ ರವೀಂದ್ರ (7), ಮಿಚೆಲ್ ಸ್ಯಾಂಟ್ನರ್ (4*) ರನ್ ಗಳಿಸಿದರು. ಭಾರತದ ಪರ ಆರ್. ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ತಲಾ ಎರಡು ಮತ್ತು ದೀಪಕ್ ಚಾಹರ್ ಹಾಗೂ ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟನ್ನು ಹಂಚಿಕೊಂಡರು.

https://www.instagram.com/p/CWYpfShAk07/?utm_medium=copy_link

By dtv

Leave a Reply

Your email address will not be published. Required fields are marked *

error: Content is protected !!