ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆಯ ಅವಾಂತರಗಳು ಮುಂದುವರಿದಿದೆ. ಭಾರೀ ವರ್ಷಧಾರೆಗೆ ಬೆಂಗಳೂರು ಏರ್ ಪೋರ್ಟ್ ರೋಡ್‍ನ ಬೆಟ್ಟಹಲಸೂರು ಕ್ರಾಸ್ ಬಳಿ ರಸ್ತೆ ಕಾಣದೆ ಡಿವೈರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರು ದೇವನಹಳ್ಳಿ ಕಡೆಯಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಬೆಟ್ಟಹಲಸೂರು ಬಳಿಯ ಫ್ಲೈ ಓವರ್ ಮೇಲೆ ಅಪಘಾತ ಸಂಭವಿಸಿದೆ. ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಮಳೆಯಿಂದಾಗಿ ರಸ್ತೆ ಕಾಣದೆ ಡಿವೈಡರ್‍ಗೆ ಡಿಕ್ಕಿ ಹೊಡೆದು ಬಳಿಕ ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಕಾರು ಬಿದ್ದಿದೆ. ಮಳೆ ಹಿನ್ನೆಲೆ ಕಾರಿನಲ್ಲಿದ್ದ ಮೃತದೇಹ ತೆಗೆಯಲು ಹರಸಾಹಸಪಟ್ರು. ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.