ಬೆಂಗಳೂರು: ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೃಷಿಕಾಯ್ದೆ ಹಿಂಪಡೆಯುವುದಾಗಿ ಪ್ರದಾನಿ ಮೋದಿ ಘೋಷಿಸಿದ ಬೆನ್ನಲ್ಲೇ ತಮ್ನ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಕೇಂದ್ರ ಸರಕರಾವನ್ನು ಟೀಕಿಸಿದ್ದಾರೆ. ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು.ಇದುವೇ ಪ್ರಜಾಪ್ರಭುತ್ವದ ಸೊಗಸು . ಇದುವೇ ರೈತರ ಸ್ವಾತಂತ್ರೋತ್ಸವ ಎಂದು ಟ್ವೀಟ್ ಮಾಡಿದ್ದಾರೆ.
ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ,
— Siddaramaiah (@siddaramaiah) November 19, 2021
ಜನಶಕ್ತಿಯ ಎದುರು ಆತ ಮಣಿಯಲೇಬೇಕು.
ಇದುವೇ ಪ್ರಜಾಪ್ರಭುತ್ವದ ಸೊಗಸು.
ಇದುವೇ ರೈತರ ಸ್ವಾತಂತ್ರ್ಯೋತ್ಸವ. 3/5#ಜೈಕಿಸಾನ್
ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ @BJP4India ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕೆಂದು ಒತ್ತಾಯಿಸುತ್ತೇನೆ. 2/5#ಜೈಕಿಸಾನ್
— Siddaramaiah (@siddaramaiah) November 19, 2021