dtvkannada

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯದಿಂದ ಪಾರಾದ ಘಟನೆ ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಕಲ್ಲರ್ಪೆ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಪುತ್ತೂರಿನಿಂದ ಸುಳ್ಯ ರಸ್ತೆಯಲ್ಲಿ ಬರುತ್ತಿದ್ದ ಕಾರು ಕಲ್ಲರ್ಪೆ ಸಮೀಪಿಸುತ್ತಿದ್ದಂತೆ, ವಿರುದ್ದ ಧಿಕ್ಕಿನಿಂದ ಓವರ್ ಟೇಕ್ ಮಾಡುತ್ತಾ ಬಂದ ವಾಹನವನ್ನು ತಪ್ಪಿಸುವ ಭರದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು, ಪುನಃ ರಸ್ತೆಯ ಮಧ್ಯದಲ್ಲಿ ಬಂದು ನಿಂತಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ .

By dtv

Leave a Reply

Your email address will not be published. Required fields are marked *

error: Content is protected !!