ಮಂಡ್ಯ: ಟಿಪ್ಪರ್ ಲಾರಿ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ದುರ್ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ದುರ್ಮರಣವನ್ನಪ್ಪಿದ್ದಾರೆ.ಮೃತಪಟ್ಟವರನ್ನು ವೆಂಕಟೇಶ್ (25), ಮುತ್ತಮ್ಮ (45), ಬಸಮ್ಮಣ್ಣಿ(30) ಎಂದು ತಿಳಿದುಬಂದಿದೆ. ಈ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.