dtvkannada

ಉಪ್ಪಿನಂಗಡಿ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೌಢಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ತುಂಬು ಗರ್ಭವತಿಯಾಗಿರುವುದು ಬೆಳಕಿಗೆ ಬಂದಿತ್ತು.ಆಕೆ ಮಂಗಳೂರು ಪರಿಸರದ ಆಸ್ಪತ್ರೆಯೊಂದರಲ್ಲಿ ಗುರುವಾರ ಸಹಜ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34 ವ) ತನ್ನನ್ನು ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ.ಈ ಹಿನ್ನೆಲೆಯಲ್ಲಿ ಅವಿವಾಹಿತ ಕೇಶವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಶವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!