ಮಂಗಳೂರು: ಮಂಗಳೂರು ಸಮೀಪದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ಎಂಟು ವರ್ಷ ಪ್ರಾಯದ ಬಾಲಕಿಯನ್ನು ಬರ್ಬರ ಅತ್ಯಾಚಾರ ಮಾಡಿ ಮೃತದೇಹವನ್ನು ಚರಂಡಿಗೆ ಎಸೆದಿರುವ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ.
ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.
ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬದ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು . ಕಾರ್ಮಿಕರು , ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ ಚರಂಡಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ .
ಆರೋಪಿಗಳ ಬಂಧನ:
ಉಳಾಯಿಬೆಟ್ಟು ಪರಾರಿ ಎಂಬಲ್ಲಿನ ಟೈಲ್ಸ್ ಪ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಐದು ಮಂದಿ ಕಾರ್ಮಿಕರು ಜಾರ್ಖಂಡ್ ಮೂಲದ ಕುಟುಂಬದ ಏಳು ವರ್ಷದ ಮಗುವನ್ನು ಬರ್ಬರ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಕೊಲೆ ಮಾಡಿದ ನಂತರ ಮೃತದೇಹವನ್ನು ಡ್ರೈನೇಜ್ ಒಳಗೆ ತುರುಕಲು ಪ್ರಯತ್ನಿಸಿದ್ದು ಆದರೆ ದೇಹ ಒಳಗೆ ಹೋಗಲಾರದೆ ಅರ್ಧದಲ್ಲಿ ಸಿಕ್ಕಿಕೊಂಡಿದ್ದು, ಮಗುವನ್ನು ಕಾಣಾದೆ ಕುಟುಂಬಿಕರು ಹುಡುಕಾಡಿದಾಗ ಡ್ರೈನೇಜ್ ಪಕ್ಕದಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಆರೋಪಿಗಳನ್ನು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ.