ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಉಧ್ಯಮಿ ಶರೀಫ್ ಕೊಯಿಲ ಅವರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಶರೀಫ್ ಕೊಯಿಲ ಇವರು ಹಲವಾರು ಚುನಾವಣೆಗಳಲ್ಲಿ ಪಕ್ಷಕ್ಕಾಗಿ ದುಡಿದಿದ್ದರು. ಇದೀಗ ಇವರನ್ನು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಮಾಡಲಾಗಿದೆ ಎಂದು ತಿಳಿದುಬಂದಿದೆ.