ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಇನ್ನೂ ಕೂಡ ಮೇಲ್ಜಾತಿ, ಕೀಳ್ಜಾತಿ ಎಂಬ ತಾರತಮ್ಯ ಜೀವಂತದಲ್ಲಿದ್ದಂತೆ ಕಾಣುತ್ತಿದೆ.ಶಾಸಕರೊಬ್ಬರು ಪಲ್ಲಕ್ಕಿ ಹೊತ್ತಿದ್ದ ವಿಚಾರ ವಿವಾದಕ್ಕೆ ಕಾರಣವಾಗಿದೆ. ಇದೀಗ ಪಲ್ಲಕ್ಕಿ ಹೊರಲು ಶಾಸಕರನ್ನು ಕರೆತಂದ ಯುವಕರು ದೇವಸ್ಥಾನದಲ್ಲಿ ತಪ್ಪು ಕಾಣಿಕೆ ಸಲ್ಲಿಸಿ ಕ್ಷಮೆ ಯಾಚಿಸಿದ್ದಾರೆ.
ಕಾರ್ತಿಕ ಹುಣ್ಣಿಮೆಯ ದೀಪೋತ್ಸವದಂದು ಬೆಳ್ತಂಗಡಿ ಲಾಯಿಲ ವೆಂಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ನಡೆದಿತ್ತು.ಈ ನಿಮ್ಮಿತ್ತ ರಾತ್ರಿ ಪೇಟೆ ಸವಾರಿ, ಪಲ್ಲಕ್ಕಿ ಉತ್ಸವ ನಡೆದಿತ್ತು. ಪಲ್ಲಕ್ಕಿ ಉತ್ಸವ ಬೆಳ್ತಂಗಡಿ ನಗರದ ಮಧ್ಯಭಾಗ ತಲುಪುತ್ತಿದ್ದಂತೆ, ಸ್ಥಳೀಯ ಶಾಸಕ ಹರೀಶ್ ಪೂಂಜಾ ಅಲ್ಲಿಗೆ ತಲುಪಿದ್ದಾರೆ. ಈ ವೆಳೆ ಅವರು ದೇವರ ಪಲ್ಲಕ್ಕಿ ಕಡೆಗೆ ತೆರಳಿ ಕೈ ಮುಗಿದು ಪ್ರಸಾದ ಸ್ವೀಕರಿಸಿದ್ದಾರೆ.
ಈ ಸಂದರ್ಭ ಅಲ್ಲೆ ಇದ್ದ ಕೆಲ ಯುವಕರು ದೇವರ ಪಲ್ಲಕ್ಕಿಗೆ ಹೆಗಲು ಕೊಡುವಂತೆ ಮನವಿ ಮಾಡಿದರು. ಅದರಂತೆ ಪಲ್ಲಕ್ಕಿಗೆ ಹೆಗಲು ಕೊಟ್ಟು ಶಾಸಕರು ಹೊತ್ತು ಸಾಗಿದರು.ಇದೀಗ ಈ ಘಟನೆ ವಿವಾದಕ್ಕೆ ಕಾರಣವಾಗಿದೆ. ಇನ್ನು ದೇವಸ್ಥಾನವೂ ಗೌಡ ಸಾರಸ್ವತ ಬ್ರಾಹ್ಮಣರಿಗೆ ಸೇರಿದ್ದಾಗಿದ್ದು, ಗೌಡ ಸಾರಸ್ವತರಲ್ಲದೆ ಬೇರೆ ಜಾತಿಗೆ ಪಲ್ಲಕ್ಕಿ ಹೊರಲು ನಿಷೇಧ ಇದೆ ಎಂದು ಹೇಳಲಾಗ್ತಿದೆ.ಈ ಹಿನ್ನೆಲೆಯಲ್ಲಿ ಪಲ್ಲಕ್ಕಿ ಹೊರುವಂತೆ ಹೇಳಿದ ಯುವಕರನ್ನು ಕರೆದು ದೇವಸ್ಥಾನದಲ್ಲಿ ತಪ್ಪು ಕಾಣಿಕೆ ಒಪ್ಪಿಸಿ ಕ್ಷಮೆಯಾಚಿಸಿದ್ದಾರೆ.