ಮಂಗಳೂರು: ಹೆಣ್ಣುಮಕ್ಕಳನ್ನು ಕ್ರೂರವಾಗಿ ಅತ್ಯಾಚಾರಗೈಯ್ಯುವ ಕಿರಾತಕರನ್ನು ಕಂಡಲ್ಲಿ ಗುಂಡಿಕ್ಕಿ ಸಾಯಿಸಬೇಕು. ಅಂಥವರಿಗೆ ಬದುಕುವ ಯಾವುದೇ ಹಕ್ಕಿಲ್ಲ ಎಂದು ಮಾಜಿ ಕಾರ್ಪೊರೇಟರ್, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಉಳಾಯಿಬೆಟ್ಟು ಪರಾರಿ ಎಂಬಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳು ತಿಳಿಸಿ, ಆ ಘಟನೆಯನ್ನು ಖಂಡಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಗ್ಧ ಮಗು ಅತ್ಯಾಚಾರಿಗಳಿಗೆ ಬಲಿಯಾಗಿದೆ. ನಾವು ದನಿ ಎತ್ತದಿದ್ದರೆ ಇನ್ನಷ್ಟು ಹೆಣ್ಮಕ್ಕಳು ಬಲಿಯಾಗುವ ಸಾಧ್ಯತೆ ಇದು ಆತಂಕ ವ್ಯಕ್ತಪಡಿಸಿದರು.
ಉಳಾಯಿಬೆಟ್ಟುವಿನ ಪರಾರಿಯಲ್ಲಿ 8 ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ, ಕೊಲೆಗೈದವರನ್ನು ಬಂಧಿಸಿದ ಪೊಲೀಸ್ ಕಮಿಷನರ್ ಹಾಗೂ ತಂಡವನ್ನು ಅಭಿನಂದಿಸುತ್ತೇನೆ. ಕೇವಲ ಆರೋಪಿಗಳನ್ನು ಬಂಧಿಸಿದರೆ ಸಾಲದು, ಆರೋಪಿಗಳಿಗೆ ನ್ಯಾಯಾಲಯ ಶೀಘ್ರ ಹಾಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದರು.