ಮಂಗಳೂರು: ನಗರದ ವೆನ್’ಲಾಕ್ ಸರ್ಕಾರಿ ಆಸ್ಪತ್ರೆಯ ವೈದ್ಯನೊಬ್ಬನ ರಸಿಕದಾಟ ಬಯಲಾಗಿದೆ. ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಕಛೇರಿ ಹೊಂದಿರುವ ಆಯುಷ್ಮಾನ್ ನೋಡೆಲ್ ಆಫೀಸರ್ ಮತ್ತು ಕುಷ್ಠರೋಗ ವಿಭಾಗದ ಆರೋಗ್ಯಧಿಕಾರಿ ಡಾ. ರತ್ನಾಕರ್ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸುವ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ತೊಡೆಯ ಓರ್ವ ಮಹಿಳೆಯನ್ನು ಕೂರಿಸುವುದು, ಅವರ ತೊಡೆಯ ಮೇಲೆ ಮಲಗುವುದು, ಮಹಿಳಾ ಸಿಬ್ಬಂದಿ ಮೂಲಕ ಆತ ಪಾದ ಸೇವೆ ಮಾಡಿಸುತ್ತಿರುವ ಮೂಲಕ ರಂಗಿನಾಟ ಆಡಿದ್ದಾನೆ.
ಸರ್ಕಾರಿ ವೈದ್ಯನಾಗಿರುವ ಈತನ ಜೊತೆಗೆ ಸಹಕರಿಸದ ಹೊರ ಗುತ್ತಿಗೆಯ ಸಿಬ್ಬಂದಿಯನ್ನು ಕೆಲಸದಿಂದ ತೆಗೆಸುವ ಅಥವಾ ಟ್ರಾನ್ಸ್ಫರ್ ಮಾಡಿಸುವ ಹೀಗೆ ಹಲವಾರು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಕೇಳಿ ಬಂದಿದೆ. ಈ ಭಯಕ್ಕೆ ಮಹಿಳಾ ಸಿಬ್ಬಂದಿ ಆತ ಹೇಳಿದಂತೆ ಕೇಳುತ್ತಿದ್ದರು. ಈತ ಮಹಿಳಾ ಸಿಬ್ಬಂದಿ ಜೊತೆ ಆಗಾಗ ಟ್ರಿಪ್ ಹೋಗುತ್ತಿದ್ದ. ಈ ಸಂದರ್ಭದಲ್ಲೂ ಆತ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ಕಿರುಕುಳದಿಂದ ನೊಂದ ಮಹಿಳೆಯರು ಆರೋಪಿ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಈ ಹಿಂದೆಯೂ ದಕ್ಷಿಣ ಕನ್ನಡ ಡಿಸಿ ಡಾ.ಕೆ.ವಿ.ರಾಜೇಂದ್ರ ವರದಿಯಂತೆ ಈತ ಸಸ್ಪೆಂಡ್ ಆಗಿದ್ದರು. ಆದರೆ ಸರ್ಕಾರದ ಆದೇಶಕ್ಕೆ ತಡೆ ತಂದು ಮತ್ತೆ ಅದೇ ಕೃತ್ಯ ಮುಂದುವರಿಸುತ್ತಿದ್ದಾನೆ.
ಉಡುಪಿ ಜಿಲ್ಲೆ ಕುಂದಾಪುರ ಮೂಲದವನಾದ ಈತ ಸದ್ಯ ಮಂಗಳೂರಿನ ದೇರಳಕಟ್ಟೆಯಲ್ಲಿ ವಾಸವಾಗಿದ್ದಾನೆ.