dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಎರಡು ದಿನದ ಹಿಂದೆ ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜ್ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ಸಂಬಂಧಿಸಿ ಇಂದು ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದು, ವಿಚಾರಣೆಗಾಗಿ ಪುತ್ತೂರು ನಗರ ಮಹಿಳಾ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಕ್ಷುಲ್ಲಕ ವಿಚಾರಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ ಘಟನೆ ಸಂಬಂಧ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದಿದ್ದು, ಮಹಿಳಾ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆಯ ಮುಂಭಾಗ ನೂರಾರು ಮಂದಿ ಹಿಂದೂ ಸಂಘಟನೆಯ ಮುಖಂಡರು ಜಮಾಯಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!