';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಎರಡು ದಿನದ ಹಿಂದೆ ನಡೆದ ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಮಹಿಳಾ ಠಾಣೆಗೆ ಕೆರೆದುಕೊಂಡು ಹೋದ ಸುದ್ದಿ ತಿಳಿದ ಕೂಡಲೇ ಠಾಣೆಯ ಮುಂಭಾಗ ನೂರಾರು ಹಿಂದೂ ಜಾಗರಣೆ ವೇದಿಕೆಯ ಕಾರ್ಯಕರ್ತರು ಜಮಾಯಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಇಂದು ನಡೆದಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ಅದರದ್ದೇ ಆದ ರೀತಿಯಲ್ಲಿ ತನಿಖೆ ಮಾಡಲಾಗುವುದು. ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಗೆ ಕರೆದುಕೊಂಡು ಬಕಲಾಗಿದೆ ಎಂದು ಹೇಳಿದ್ದಾರೆ. ಮೊನ್ನೆ ನಡೆದ ಅಹಿತಕರ ಘಟನೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಡಿವೈಎಸ್ಪಿ ಮತ್ತು ಹಿಂದೂ ಸಂಘಟನೆಯ ಮುಖಂಡರ ನಡುವಿನ ಮಾತುಕತೆಯ ಬಳಿಕ ಠಾಣೆಯ ಬಳಿ ಸೇರಿದ್ದ ಜನರು ಪ್ರತಿಭಟನೆ ಕೈ ಬಿಟ್ಟು ಹಿಂತಿರುಗಿದ್ದಾರೆ ಎಂದು ತಿಳಿದು ಬಂದಿದೆ.