ಪುತ್ತೂರು: ತಾಲೂಕಿನ ಕೊಂಬೆಟ್ಟು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂಬ ವಿಚಾರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪುತ್ತೂರು ಮಹಿಳಾ ಠಾಣೆಯಲ್ಲಿ ಜಮಾಯಿಸಿ ಡಿವೈಎಸ್ಪಿ ಜೊತೆ ಮಾತುಕತೆ ನಡೆಸಿ ತೆರಳಿದ ಬಳಿಕ ಮುಸ್ಲಿಂ ವಿದ್ಯಾರ್ಥಿಗಳನ್ನೂ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಂಘಟನೆಯ ಕಾರ್ಯಕರ್ತರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದಾರೆ.
ಠಾಣೆಗೆ ಬೇಟಿ ನೀಡಿ ಡಿವೈಎಸ್ಪಿ ಜೊತೆ ಮಾತುಕತೆ ನಡೆಸಿದ ಮುಸ್ಲಿಂ ಮುಖಂಡರು ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಚೂರಿ ಇರಿದ ಆರೋಪಿಗಳ ಮೇಲೆ ಎಫ್’ಐಆರ್ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿದರು. ನೈಜ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಹೇಳಿದರು.
ಮುಂದೆ ನ್ಯಾಯ ಸಿಗದಿದ್ದರೆ ಕಾನೂನಿನ ಪ್ರಕಾರ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪಿಎಫ್ಐ, ಸಿ.ಎಫ್.ಐ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.