ಕೇರಳದಲ್ಲಿ ನೊರೊ ವೈರಸ್ ಪತ್ತೆ, ಕರ್ನಾಟಕದಲ್ಲಿ ಕಟ್ಟೆಚ್ಚರ; ಮೈಸೂರು ಜಿಲ್ಲೆಯ ಗ್ರಾಮವೊಂದರ ಮನೆಮನೆಗೆ ತೆರಳಿ ಸಮೀಕ್ಷೆ
ಕೇರಳ: ಕೇರಳದಲ್ಲಿ ನೊರೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೀದರ್-ತೆಲಂಗಾನ ಗಡಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಸದ್ಯ ಗಡಿಯಲ್ಲಿ ಮನೆ ಮನೆಗೆ ತೆರಳಿ ಸರ್ವೆ ನಡೆಸುತ್ತಿದ್ದಾರೆ.
ಸದ್ಯ ಕೇರಳದ ವಯನಾಡಿನಲ್ಲಿ 13 ಪ್ರಕರಣ ಪತ್ತೆಯಾಗಿದ್ದು, ಕೇರಳದಿಂದ ಬಂದಿರುವವರ ಬಗ್ಗೆ ನಿಗಾ ಇಡಲು ಸೂಚನೆ ನೀಡಲಾಗಿದೆ. ಕೇರಳದಿಂದ ಬಂದು ವಾಂತಿ ಭೇದಿ ಕಾಣಿಸಿಕೊಂಡರೆ ಅಂತವರು ಪರೀಕ್ಷೆ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ನೊರೊ ವೈರಸ್ ಲಕ್ಷಣ ಹಾಗೂ ಎಚ್ಚರಿಕೆ ವಹಿಸುವುದರ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಕಟ್ಟೆಚ್ಚರ ವಹಿಸುವಂತೆ ಸೂಚನೆ:
ಕೊರೊನಾ ಹೊಸ ರೂಪಾಂತರಿ ತಳಿ ಒಮಿಕ್ರಾನ್ (B.1.1529) ಪತ್ತೆ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಹೊಸ ತಳಿ ಹೆಚ್ಚು ವೇಗವಾಗಿ ಹರಡಲಿದೆ ಎಂದು ತಜ್ಞರು ಮುನ್ನೆಚ್ಚರಿಕೆ ನೀಡಿರುವುದರಿಂದ ಹೈ ಅಲರ್ಟ್ ಘೋಷಿಸಲಾಗಿದೆ. ವ್ಯಾಕ್ಸಿನ್ ಪ್ರೊಟೆಕ್ಷನ್ ಮೀರಿ ಸೋಂಕು ತೀವ್ರಗೊಳಿಸುವ ಬಗ್ಗೆ ತಜ್ಞರು ಎಚ್ಚರಿಸಿದ್ದು, ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಹಾಂಗ್ಕಾಂಗ್, ದಕ್ಷಿಣ ಆಫ್ರಿಕಾ, ಬೋಟ್ಸವಾನಾ ದೇಶಗಳಿಂದ ಬರುವವರಿಗೆ ಕಡ್ಡಾಯ ಟೆಸ್ಟ್, ಸ್ಕ್ರೀನಿಂಗ್ ಹಾಗೂ ಟ್ರಾಕಿಂಗ್ ಮಾಡುವಂತೆ ಸೂಚನೆ ನೀಡಲಾಗಿದೆ. ವಿದೇಶಗಳಿಂದ ಬಂದವರಲ್ಲಿ ಪಾಸಿಟಿವ್ ಕಂಡುಬಂದರೆ ಸ್ಯಾಂಪಲ್‌ಗಳನ್ನು ಸೀಕ್ವೆನ್ಸಿಂಗ್ ಮಾಡುವಂತೆ ಸಲಹೆ ನೀಡಲಾಗಿದೆ.