dtvkannada

ಮಾಣಿ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊರ್ವನಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಮಾಣಿಯಲ್ಲಿ ಇಂದು ಸಂಜೆ ನಡೆದಿದೆ.

ಗಾಯಗೊಂಡ ಬಾಲಕನನ್ನು ಮಾಣಿ ಕರ್ನಾಟಕ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಭರತ್ ಎಂದು ಗುರುತಿಸಲಾಗಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲೆ ಬಿಟ್ಟು ಬರುವಾಗ ರಸ್ತೆ ದಾಟುತ್ತಿದ್ದಾಗ ಅತೀ ವೇಗದಲ್ಲಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!