ಬೆಳ್ತಂಗಡಿ: ಸ್ನಾನಕ್ಕೆಂದು ನದಿಗಿಳಿದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳ್ತಂಗಡಿ ಸಮೀಪದ ನಡ ಗ್ರಾಮದ ಕುತ್ರೋಟ್ಟು ಎಂಬಲ್ಲಿ ಇಂದು ನಡೆದಿದೆ.
ಮೃತಪಟ್ಟ ಬಾಲಕನನ್ನು ಉಜಿರೆ ಕಾಶಿಬೆಟ್ಟು ನಿವಾಸಿ ಇಸ್ಮಾಯಿಲ್ ರವರ ಮಗ ನಬಾನ್ (22) ಎಂದು ಗುರುತಿಸಲಾಗಿದೆ.ಸ್ನಾನೆಕ್ಕೆಂದು ನದಿಗಿಳಿದ ಮೂವರು ಸ್ನೇಹಿತರಲ್ಲಿ ನಬಾನ್ ನೀರಿನ ಸೆಳೆತಕ್ಕೆ ಸಿಲುಕಿ ನೀರು ಪಾಲಾದ ಎಂದು ಹೇಳಲಾಗಿದೆ.
ಸ್ಥಳೀಯರ ಸಹಕಾರದಿಂದ ಬಾಲಕನನ್ನು ಮೇಲೆಕೆತ್ತಲಾದರು ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದ.ಮೃತ ಶರೀರವೂ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.