dtvkannada

ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ನಡುವೆ ಭೀಕರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇದೀಗ ನಡೆದಿದೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ ಮಸೀದಿ ಬಳಿ ಲಾರಿ ಮತ್ತು ರಿಕ್ಷಾ ಡಿಕ್ಕಿ ಹೊಡೆದಿದ್ದು ರಿಕ್ಷಾದಲ್ಲಿದ್ದ 12 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ತಿಳಿದು ಬಂದಿಲ್ಲ

By dtv

Leave a Reply

Your email address will not be published. Required fields are marked *

error: Content is protected !!