ಉಪ್ಪಿನಂಗಡಿ: ರಿಕ್ಷಾ ಮತ್ತು ಲಾರಿ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಇಂದು ಸಂಜೆ ನಡೆದಿದೆ.ಮೃತ ಬಾಲಕನನ್ನು ಮಹಮ್ಮದ್ ಅಲ್ತಾಫ್ 12) ಎಂದು ತಿಳಿದು ಬಂದಿದೆ.
ಮೃತ ಬಾಲಕನ ತಾಯಿ ಖತೀಜ ಮಠ ಸಹಿತ ರಿಕ್ಷಾದಲ್ಲಿ ಇಬ್ಬರು ಮಹಿಳೆಯರು ಹಾಗೂ ರಿಕ್ಷಾ ಚಾಲಕ ಸಿದ್ದೀಕ್ ಮಠ ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ ಮಸೀದಿ ಬಳಿ ಈ ದುರ್ಘಟನೆ ನಡೆದಿದೆ.ಕೋವಿಡ್ ವ್ಯಾಕ್ಸಿನ್ ಪಡೆಯಲು ಆಟೋ ರಿಕ್ಷಾದಲ್ಲಿ ತೆರಳಿ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಆಟೋದಲ್ಲಿ ಮೂವರು ಮಹಿಳೆಯರು ಸಹಿತ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.