dtvkannada

ಮಂಗಳೂರು: 7 ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿಎಸ್‌ಸಿ- 1 ನ್ಯಾಯಾಲಯದ ನ್ಯಾಯಾಧೀಶರು 7 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ



ಮಂಗಳೂರು ತಾಲೂಕಿನ ಕೋಟೆಕಾರು ಗ್ರಾಮದ ದೇರಳಕಟ್ಟೆ ಸಮೀಪದ ಇರ್ಫಾನ್‌ (28) ಶಿಕ್ಷೆಗೊಳಗಾದ ಆರೋಪಿ
2014ರಲ್ಲಿ ಈತ ವಿದ್ಯಾರ್ಥಿನಿಯನ್ನು ಅಪಹರಿಸಿ ಲಾಡ್ಜ್‌ನಲ್ಲಿ ಅಕ್ರಮವಾಗಿ ಕೂಡಿ ಹಾಕಿ ಅತ್ಯಾಚಾರವೆಸಗಿದ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇರ್ಫಾನ್ ಸಂತ್ರಸ್ತೆಯ ಪರಿಚಯ ಮಾಡಿಕೊಂಡು ಪ್ರೀತಿ-ಪ್ರೇಮದ ಹೆಸರಿನಲ್ಲಿ ಫೋನ್‌ನಲ್ಲಿ ಮಾತನಾಡುತ್ತಿದ್ದ. ಅಲ್ಲದೆ ಮದುವೆಯಾಗಬೇಕು ಎಂದು ಒತ್ತಾಯಿಸುತ್ತಿದ್ದ ಎನ್ನಲಾಗಿದೆ.

2014ರ ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲೆಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ದೇರಳಕಟ್ಟೆ ಸಮೀಪದ ನಾಟೆಕಲ್‌ನಲ್ಲಿ ತಡೆದು ನಿಲ್ಲಿಸಿ ಕಾರಿನಲ್ಲಿ ಅಪಹರಿಸಿ ಚಿಕ್ಕಮಗಳೂರಿನ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದನು.



ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎನ್ನಲಾಗಿತ್ತು ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಬಗ್ಗೆ ಆಕೆಯ ಹೆತ್ತವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಆಗಿನ ಉಳ್ಳಾಲ ಇನ್‌ಸ್ಪೆಕ್ಟರ್ ಸವಿತ್ರ ತೇಜ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶೆ ಸಾವಿತ್ರಿ ವಿ.ಭಟ್ ವಿಚಾರಣೆ ನಡೆಸಿ ಪೂರಕ ಸಾಕ್ಷ್ಯಗಳನ್ನು ಪರಿಗಣಿಸಿ ಆರೋಪಿಯ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.

ಅಪಹರಣ ಕೃತ್ಯಕ್ಕೆ ಐಪಿಸಿ ಕಲಂ 366(ಎ)ನಡಿ 3 ವರ್ಷ ಕಠಿಣ ಸಜೆ ಮತ್ತು 5,000 ರೂ. ದಂಡ, ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ 15 ದಿನ ಹೆಚ್ಚುವರಿ ಕಠಿಣ ಸಜೆ,ತಡೆದು ನಿಲ್ಲಿಸಿದ ಕೃತ್ಯಕ್ಕೆ ಐಪಿಸಿ 342 ಕಲಂನಡಿ 5 ತಿಂಗಳು ಕಠಿಣ ಸಜೆ ಮತ್ತು 1,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಮತ್ತೆ 15 ದಿನ ಕಠಿಣ ಸಜೆ, ಕೊಲೆ ಬೆದರಿಕೆಯೊಡ್ಡಿರುವುದಕ್ಕೆ ಐಪಿಸಿ 506ರಡಿ 1 ವರ್ಷ ಕಠಿಣ ಸಜೆ ಮತ್ತು 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಹಿ 2 ತಿಂಗಳು ಕಠಿಣ ಸಜೆ, ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಪೊಕ್ಸೋ ಕಾಯ್ದೆ ಕಲಂ 4ರ ಅಡಿ ಹಾಗೂ ಐಪಿಸಿ ಕಲಂ 376ರಡಿ 7 ವರ್ಷ ಕಠಿಣ ಸಜೆ ಮತ್ತು 15,000 ರೂ. ದಂಡ,ಒಂದು ವೇಳೆ ದಂಡ ಪಾವತಿಸಲು ತಪ್ಪಿದರೆ ಹೆಚ್ಚುವರಿಯಾಗಿ 2 ತಿಂಗಳ ಕಾಣ ಸಜೆ ವಿಧಿಸಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೆಂಕಟರಮಣ ಸ್ವಾಮಿ ಸಿ ವಾದಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!