';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಧಾರವಾಡ: ಇಲ್ಲಿನ ಖಾಸಗಿ ಶಾಲೆ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎಸ್ಡಿಎಮ್ ಕಾಲೇಜಿನ ವಿದ್ಯಾರ್ಥಿನಿಯಿಂದ ಸೋಂಕು ಹರಡಿದೆ ಎಂಬ ಮಾಹಿತಿ ಬಂದಿದೆ. ಈ ಮೊದಲು ಹುಬ್ಬಳ್ಳಿಯ ಎಸ್ಡಿಎಮ್ ಕಾಲೇಜಿನ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಂಡುಬಂದಿತ್ತು. ಬಳಿಕ, ಇದೀಗ ವಿದ್ಯಾರ್ಥಿನಿಯ ಸಹೋದರನಿಗೆ ಕೊರೊನಾ ಸೋಂಕು ದೃಡಪಟ್ಟಿದೆ.
ಹುಬ್ಬಳ್ಳಿಯ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿ ಓದುತ್ತಿರುವ ಬಗ್ಗೆ ತಿಳಿದುಬಂದಿದೆ. ಆದರ್ಶನಗರದ ಶಾಲೆಯಲ್ಲಿ ವಿದ್ಯಾರ್ಥಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವುದು ತಿಳಿದುಬಂದಿದೆ. ವಿದ್ಯಾರ್ಥಿಗೆ ಕೊರೊನಾ ಹಿನ್ನೆಲೆ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 4ರವರೆಗೆ ಆಡಳಿತ ಮಂಡಳಿ ಶಾಲೆಗೆ ರಜೆ ಘೋಷಿಸಿದೆ. ಸೋಂಕಿತ ವಿದ್ಯಾರ್ಥಿಯ ಕುಟುಂಬಸ್ಥರಿಗೆ ಕೊವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ಕೊವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆ ಮನೆಯಲ್ಲಿಯೇ ಸೋಂಕಿತ ವಿದ್ಯಾರ್ಥಿಗೆ ಕ್ವಾರಂಟೈನ್ ಮಾಡಲಾಗಿದೆ.