';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕೊಂಬೆಟ್ಟು ಶಾಲಾ ವಿದ್ಯಾರ್ಥಿಗಳ ನಡುವೆ ನಡೆದ ಹಲ್ಲೆ ಪ್ರಕರಣ ಪುತ್ತೂರು ತಾಲೂಕಿನೆಲ್ಲೆಡೆ ಭಾರೀ ಸುದ್ದಿಯಾಗಿದ್ದ ಬೆನ್ನಲ್ಲೇ ಇಂದು ಮತ್ತೆ ಕಾಲೇಜ್ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರನ್ನು ಕಂಡು ವಿದ್ಯಾರ್ಥಿಗಳು ಅಲ್ಲಿಂದ ಚದುರಿದ್ದಾರೆ.
ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದು ಸ್ಥಳೀಯರ ಮಾಹಿತಿಯಿಂದ ಪೊಲೀಸರು ಬಂದಾಗ ಅಲ್ಲಿ ನೆರೆದಿದ್ದ ಗುಂಪು ಚದುರಿರುವ ಕುರಿತು ತಿಳಿದು ಬಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ ಎಂಬ ನೆಪವಿಟ್ಟುಕೊಂಡು ವಿದ್ಯಾರ್ಥಿಗಳು ಪರಸ್ಪರ ಬೆದರಿಕೆ ಹಾಕಿಕೊಂಡು, ಅವಾಚ್ಯ ಶಬ್ದಗಳಿಂದು ಬೈದಾಡುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.