ಮಂಗಳೂರು: ಬ್ಯೂಟಿ ಪಾರ್ಲರ್ ನಲ್ಲಿ ಕೆಲಸಕ್ಕಿದ್ದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಕಾವೂರು ಬಳಿಯ ಆಕಾಶಭವನದಲ್ಲಿ ನಡೆದಿದೆ.

ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ (22) ಮೃತ ಯುವತಿಯಾಗಿದ್ದು ಆಕಾಶಭವನದಲ್ಲಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ, ನಿನ್ನೆ ಸಂಜೆ ಎಂದಿನಂತೆ ಕೆಲಸ ಮುಗಿಸಿ ಮನೆಗೆ ಆಗಮಿಸಿದ್ದಳು. ಮನೆಯಲ್ಲಿ ತನ್ನ ರೂಮಿಗೆ ತೆರಳಿದ ಯುವತಿ ಸ್ವಲ್ಪ ಸಮಯದ ನಂತರ ನೋಡಬೇಕಾದರೆ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದು ಮನೆಯವರು ರಕ್ಷಿಸಲು ಪ್ರಯತ್ನ ಪಟ್ಟರು ಆದಾಗಲೇ ಪ್ರಾಣ ಪಕ್ಷಿ ಹಾರಿ ಹೋಗಿತ್ತು ಎಂದು ತಿಳಿದು ಬಂದಿದ್ದು ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.