ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಸಿಗ್ನಲ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಆರಂತೋಡು ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ಕಂಬಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಎದುರಿನ ಸಿಟಿನ ಮುಂಬಾಗದ ಎರಡು ಏರ್ ಬ್ಯಾಗ್ ಓಪನ್ ಆದ ಕಾರಣ ಚಾಲಕ ಮತ್ತು ಸಹ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.