ಪುತ್ತೂರು: ಪುತ್ತೂರು ತಾಲೂಕಿನ ಮಾಜಿ ಶಾಸಕ, ಬಿಜೆಪಿ ಭೀಷ್ಮ ಉರಿಮಜಲು ಕೆ ರಾಮ್ ಭಟ್ (92) ವಯೋಸಹಜ ಕಾಯಿಲೆಯಿಂದ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.
ಮಾಜಿ ಶಾಸಕರ ಸುದ್ದಿ ತಿಳಿದ ತಕ್ಷಣ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಸಚಿವ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನದ ಹಿಂದೆಯಷ್ಟೇ ಅಲ್ಪ ಚೇತರಿಸಿಕೊಂಡು ಮನೆಗೆ ಬಂದಿದ್ದರು. ಆದರೆ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
7 ಬಾರಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅವರು 1977 ಹಾಗೂ 1983 ರಲ್ಲಿ ಗೆದ್ದು ಶಾಸಕರಾಗಿದ್ದರು . 1957 ರಲ್ಲಿ ಮೊದಲ ಬಾರಿ ಜನ ಸಂಘದ ಅಡಿಯಲ್ಲಿ ಚುನಾವಣೆ ಸ್ಪರ್ಧಿಸಿದ್ದರೆ 1985 ರಲ್ಲಿ ಕೊನೆಯ ಬಾರಿ ಬಿಜೆಪಿ ಚಿಹ್ನೆಯಡಿ ಸ್ಪರ್ದಿಸಿದ್ದರು.
ಪ್ರದಾನಿ ಮೋದಿ ಸಂತಾಪ: