ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಿರಿಯ ರಕ್ಷಣಾ ಅಧಿಕಾರಿಗಳನ್ನು ಹೊತ್ತ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ ಬುಧವಾರ ಪತನಗೊಂಡಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನೂ ಹೆಚ್ಚಿನ ಸಾವು ಸಂಭವಿಸುವ ಸಾಧ್ಯತೆ ಹೆಚ್ಚು ಇದೆ ಎಂದು ತಿಳಿದು ಬಂದಿದೆ.
ವರದಿಗಳ ಪ್ರಕಾರ, 14 ಹಿರಿಯ ರಕ್ಷಣಾ ಅಧಿಕಾರಿಗಳಿದ್ದ ಹೆಲಿಕಾಪ್ಟರ್ ಸೂಲೂರು ವಾಯುನೆಲೆಯಿಂದ ವೆಲ್ಲಿಂಗ್ಟನ್‌ಗೆ ಹಾರಿತ್ತು. ಇದುವರೆಗೆ ಮೂವರು ಅಧಿಕಾರಿಗಳನ್ನು ರಕ್ಷಿಸಲಾಗಿದೆ. ಈ ಮೂವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ನೀಲಗಿರಿಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್‌ಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.
ಬಿಪಿನ್ ರಾವತ್ ಅವರು ಬುಧವಾರ ಮುಂಜಾನೆ ದೆಹಲಿಯಿಂದ ಹೊರಟಿದ್ದರು. ದೆಹಲಿಯಿಂದ ಸೂಲೂರು ವಾಯು ನೆಲೆಯನ್ನು ತಲುಪಿ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕೂಣೂರಿಗೆ ಹೊರಟಿದ್ದರು. ಮಾರ್ಗ ಮಧ್ಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬಿಪಿನ್ ರಾವತ್ ಅವರೊಂದಿಗೆ ಅವರ ಸಿಬ್ಬಂದಿ ಮತ್ತು ಕೆಲವು ಕುಟುಂಬ ಸದಸ್ಯರು ಮಿ-ಸಿರೀಸ್ ಚಾಪರ್‌ನಲ್ಲಿದ್ದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಹೆಲಿಕಾಪ್ಟರ್ ಅಪಘಾತಕ್ಕೀಡಾದ ತಕ್ಷಣ, ಹತ್ತಿರದ ನೆಲೆಗಳಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಮೂಲಗಳು ಖಚಿತಪಡಿಸಿವೆ.
https://twitter.com/ANI/status/1468498247261966336?ref_src=twsrc%5Etfw%7Ctwcamp%5Etweetembed%7Ctwterm%5E1468498247261966336%7Ctwgr%5E%7Ctwcon%5Es1_c10&ref_url=https%3A%2F%2Fpratidhvani.com%2Farmy-helicopter-with-cds-general-bipin-rawat-crashed-in-tamil%2F
ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದೆ. ಸಿಡಿಎಸ್ ಬಿಪಿನ್ ರಾವತ್ ಇದ್ದ IAF Mi-12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.