ಬೆಂಗಳೂರು:ರಾಜ್ಯದಲ್ಲಿ ಬುಧವಾರ 399 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು. 6 ಮಂದಿ ಸೋಂಕಿಗೆ ಬಲಿಯಾಗಿದ್ದು, 238 ಜನರು ಗುಣಮುಖರಾಗಿದ್ದಾರೆ.
ರಾಜಧಾನಿಯಲ್ಲಿ ಬುಧವಾರದಂದು 244 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಮೂವರು ಸೋಂಕಿಗೆ ಬಲಿಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,58,119 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,354 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,36,329 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಹಾರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರು ಸೋಂಕಿತರು ಬಲಿ: ಬೆಂಗಳೂರು ನಗರ 3, ಕೊಡಗು 1, ಕೊಪ್ಪಳ 1, ತುಮಕೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿರುತ್ತಾರೆ ಎಂದು ತಿಳಿದು ಬಂದಿದೆ.