ಬೆಂಗಳೂರು: ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸದ್ಯಕ್ಕೆ ಯಾವುದೇ ನೈಟ್ ಕರ್ಫ್ಯೂ ಹಾಗೂ ಕಠಿಣ ನಿರ್ಬಂಧಗಳು ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ನೈಟ್ ಕರ್ಫ್ಯೂ ಕೂಡ ಇಲ್ಲ ಬದಲಾಗಿ ಒಂದು ವಾರದ ಬೆಳವಣಿಗೆ ಗಮನಿಸಿ ಬಳಿಕ ನಿರ್ಧಾರ ಮಾಡ್ತೇವೆ ಎಂದರು.
ವಸತಿ ನಿಲಯಗಳಲ್ಲಿ ಸೋಂಕು ಪತ್ತೆ ವಿಚಾರವಾಗಿ ಮಾತನಾಡಿ, ಹಾಸ್ಟೆಲ್ ಗಳಿಗೆ ವಿಶೇಷ ಮಾರ್ಗಸೂಚಿ ಕೈಗೊಳ್ಳಲಾಗಿದೆ.
ಒಂದೇ ಬಾರಿ ಎಲ್ಲರೂ ಊಟಕ್ಕೆ ಕೂರದಂತೆ ಸೂಚನೆ ನೀಡಲಾಗಿದೆ ಹಾಗೂ ವಾರ್ಡನ್, ಅಡುಗೆಯವರಿಗೆ 2 ಡೋಸ್ ಲಸಿಕೆ ಆಗಬೇಕು. ಐಸೋಲೇಶನ್ ರೂಂ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
3 ಜನರಿಗೆ ಬಂದ್ರೂ ಕ್ಲಸ್ಟರ್ ಅಂತ ನಿರ್ಧಾರ ಮಾಡಿದ್ದೇವೆ. ಕ್ಲಸ್ಟರ್ ಮ್ಯಾನೇಜ್‌ಮೆಂಟ್‌ಗೆ ಸೂಚನೆ ಕೊಟ್ಟಿದ್ದೇವೆ.
ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದರು. ಇನ್ನು ಗಡಿ ಭಾಗದಲ್ಲಿರುವ ಕಟ್ಟೆಚ್ಚರ ಮುಂದುವರೆಯಲಿದೆ ಎಂದರು.
ಕೇರಳ ವಿದ್ಯಾರ್ಥಿಗಳಿಗೆ ನಿರ್ಬಂಧ ಮುಂದುವರಿದಿದ್ದು ಆರ್‌ಟಿಪಿಸಿಆರ್ ಟೆಸ್ಟ್ ಸೇರಿ ಇತರ ನಿರ್ಬಂಧಗಳು ಮುಂದುವರಿಯಲಿದೆ ಎಂದ ಅವರು ಒಂದು ವಾರದ ನಂತರ ಕ್ರಿಸ್ಮಸ್ ಮತ್ತು ಹೊಸ ವರ್ಷಕ್ಕೆ ನಿಯಮಾವಳಿ ರೂಪಿಸುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದರು.