ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಮೂರು ಒಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. 34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ವಾಪಸಾಗಿರುವ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆಯಲ್ಲಿ ಒಮಿಕ್ರಾನ್ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಒಮಿಕ್ರಾನ್ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿ ಐವರು, ದ್ವಿತೀಯ ಸಂಪರ್ಕದಲ್ಲಿ 15 ಜನರನ್ನು ಪತ್ತೆ ಮಾಡಲಾಗಿದೆ. ಎಲ್ಲ ಸಂಪರ್ಕಿತರ ಸ್ಯಾಂಪಲ್ಸ್ ಪಡೆದು ಜಿನೋಮಿಕ್ ಸೀಕ್ವೆನ್ಸಿಂಗ್‌ಗೆ ರವಾನಿಸಲಾಗಿದೆ ಎಂದು ಟ್ವೀಟ್ ಮೂಲಕ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಪಂಜಾಬ್ ಹಾಗೂ ಆಂಧ್ರಪ್ರದೇಶ ಸೇರಿ ಒಟ್ಟು 3 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.
https://twitter.com/mla_sudhakar/status/1469937250909962242?s=21