ಮಂಗಳೂರು, ಡಿ.14: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನ ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಈಗ ಆರಂಭಗೊಂಡಿದೆ.

ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 7:50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಯಿತು. 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಆರಂಭವಾಗಿದೆ.
ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ, ಎಸ್‌ಡಿಪಿಐನಿಂದ ಶಾಫಿ ಬೆಳ್ಳಾರೆ ಸ್ಪರ್ಧಿಸಿದ್ದು, 11 ಗಂಟೆಯ ಒಳಗೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆ ಇದೆ.
ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯಲ್ಲಿ ಶೇ. 99.55 ಮತದಾನವಾಗಿತ್ತು.